Featured

ಸುರತ್ಕಲ್:‌ ಸರಣಿಕಳ್ಳತನ ; ಬೆಳ್ಳಿ ದೀಪ ಸಹಿತ 50,000 ಮೌಲ್ಯದ ವಸ್ತು ಕಳವು – vishwanews24

ಸುರತ್ಕಲ್:‌ ಸರಣಿಕಳ್ಳತನ ; ಬೆಳ್ಳಿ ದೀಪ ಸಹಿತ 50,000 ಮೌಲ್ಯದ ವಸ್ತು ಕಳವು

ಸುರತ್ಕಲ್: ಮುಂಚೂರು ಸಮೀಪದ ಮೋದಿನಗರ ಹಾಗೂ ಪದ್ಮಶ್ರೀ ಲೇಔಟ್ ಬಡಾವಣೆಗಳಲ್ಲಿ ಕಳ್ಳರು ನಾಲ್ಕು ಮನೆಗಳ ಬಾಗಿಲು ಮುರಿದು ಮನೆಯೊಂದರಲ್ಲಿದ್ದ ಬೆಳ್ಳಿ ದೀಪ ಸಹಿತ 50,000 ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಅಲ್ಲದೆ ಈ ಬಡಾವಣೆಯ ಏಳೆಂಟು ಮನೆಗಳ ಗೇಟು ತೆರೆದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಕಳ್ಳರ ಚಲನ ವಲನ ಬಡಾವಣೆಯಲ್ಲಿದ್ದ ಮನೆಗಳ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ಇಬ್ಬರು ಕಳ್ಳರ ಕೃತ್ಯವಾಗಿದ್ದು ಕೈಯಲ್ಲಿ ಕತ್ತಿ, ಬ್ಯಾಗುಗಳಲ್ಲಿ ಆಯುಧ ಇಟ್ಟು ಕೊಂಡಿರುವ ಸಾಧ್ಯತೆಯಿದ್ದು, ಬಾಗಿಲು ಮುರಿಯಲು ಲಿವರ್‌ನಂತಹ ಚೂಪಾದ ವಸ್ತುಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದೆ.

ಬಡಾವಣೆಯಲ್ಲಿ ಯಾರು ವಾಸ ಇಲ್ಲದಂತಹ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡಿದ್ದು. ಉಳಿದ ಮನೆಗಳಲ್ಲಿ ನಾಯಿಗಳು ಬೊಗಳುವ ಸದ್ದು ಕೇಳಿ ಹಿಂದಿರುಗಿದ್ದಾರೆ. ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago