Featured

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವೀಕರಿಸಲಾಗಿದೆ.

ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ವೃತ್ತಕ್ಕೆ ವೀರ ಸಾವರ್ಕರ್ ಹೆಸರನ್ನು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಸಭೆಯ ಮುಂದಿಟ್ಟಿದ್ದರು. 2021ರ ಆಗಸ್ಟ್ 3ರಂದು ನಡೆದ ಸಭೆಯಲ್ಲಿ ಸ್ಟ್ಯಾಂಡಿಂಗ್ ಕಮಿಟಿಗೆ ಕಳುಹಿಸಲಾಗಿತ್ತು. ಆದರೆ ಪಾಲಿಕೆ ಸದಸ್ಯರಾದ ಎ.ಸಿ. ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ  ಇದನ್ನು ವಿರೋಧಿಸಿದ್ದರು. ಬಳಿಕ ಸ್ಟ್ಯಾಂಡಿಂಗ್ ಕಮಿಟಿಯು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಕೌನ್ಸಿಲ್ ಸಭೆಯಲ್ಲಿ ಮಂಡಿಸಿತ್ತು. ಈ ವೇಳೆಯೂ ಸದಸ್ಯರಾದ ಕೇಶವ ಮತ್ತು ಶಂಶುದ್ದೀನ್ ಅವರು ವಿರೋಧಿಸಿದ್ದರು ಆದರೇ ಅದೇ ವಾರ್ಡಿನ ಸದಸ್ಯರಾದ ವರುಣ್ ಚೌಟ ಸಾವರ್ಕರ್ ವೃತ್ತ ಮರುನಾಮಕರಣ ವಿಚಾರದಲ್ಲಿ ಬೆಂಬಲಿಸಿ ಸ್ವಾಗತಿಸಿದ್ದರು.

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ – Vishwanews24

ಸದ್ಯ ಪ್ರಸ್ತಾವವನ್ನು ಪಾಲಿಕೆ ಸ್ವೀಕರಿಸಿದ್ದು, ಈ ಸಂಬಂಧ ದಿನಪತ್ರಿಕೆಗಳಲ್ಲಿ ಮಾಹಿತಿ ನೀಡಿ ಜನರಿಂದ ಸಲಹೆಗಳನ್ನು ಆಹ್ವಾನಿಸಲಿದೆ. ಆ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಕೆಲ ತಿಂಗಳ ಹಿಂದಷ್ಟೇ ಈ ಜಂಕ್ಷನ್‌ನಲ್ಲಿ ಸಾವರ್ಕರ್ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಇದನ್ನು ಕೆಲವು ನಾಗರಿಕರು ವಿರೋಧಿಸಿದ್ದರು. ಬಳಿಕ ಪಾಲಿಕೆ ಅಧಿಕಾರಿಗಳು ಫ್ಲೆಕ್ಸ್‌ ತೆರವುಗೊಳಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago