ಸುರತ್ಕಲ್: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.
ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ.
ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಅವರು ನೀರಿನಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಮುಹಮ್ಮದ್ ಸಮೀರ್, ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು ಎನ್ನಲಾಗಿದೆ.
ಈ ವೇಳೆ ದಡದಲ್ಲಿದ್ದವರು ಬೊಬ್ಬೆ ಹಾಕಿದ್ದು, ಬೊಬ್ಬೆಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ, ಐಮಾಮ್ ಮತ್ತು ಫಾಝಿಲ್ ಅಪಾಯದಿಂದ ಪಾರಾಗಿದ್ದು, ಮುಹಮ್ಮದ್ ಸಮೀರ್ ಮೃತಪಟ್ಟರೆಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…