Featured

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ – vishwanews24

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ.

ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿತ್ತು.ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಮಾನ್ಯ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ ಇದಕ್ಕೆ ತಪ್ಪಿದಲ್ಲಿ ಮಾನ್ಯ ಜಿಲ್ಲಾ ನ್ಯಾಯಾಲಯದ ಈ ಹಿಂದಿನ ಆದೇಶದ ಪ್ರಕಾರ ಶಿಕ್ಷೆಗೆ ಒಳಪಡಬೇಕಾಗಿ ಆದೇಶಿಸಿ ತೀರ್ಪು ಪ್ರಕಟ ಮಾಡಿದೆ. ತೀರ್ಪು ಪ್ರಕಟವಾದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು ನ್ಯಾಯಾಲಯವು ಈತನ ಮೇಲೆ ಬಂಧನದ ವಾರೆಂಟ್ ಹೊರಡಿಸಿದೆ.

ಈತನನ್ನು ದಿ.14 ರಂದು ಪೊಲೀಸರು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್ ಎಂಬಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಈ ಹಿಂದೆ ನೀಡಿದ ತೀರ್ಪಿನಂತೆ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ 5000/- ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago