Featured

ಸುಳ್ಯ : ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ   ಆತ್ಮಹತ್ಯೆಗೆ ಶರಣು – Vishwanews24

ಸುಳ್ಯ : ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ   ಆತ್ಮಹತ್ಯೆಗೆ ಶರಣು – Vishwanews24

ಸುಳ್ಯ : ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದೇಹದ ಹತ್ತಿರ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅಸೌಖ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ, ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಅವರು ಅದರಲ್ಲಿ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ತನ್ನ ಮರಣದ ಕಾರಣದಿಂದ ಬಸ್‌ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದೂ ಅದರಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.

80ರ ದಶಕದಲ್ಲಿ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಕರ್ಯ ಕಲ್ಪಿಸಿ ಸಾವಿರಾರು ಜನರು ತಮ್ಮ ದೈನಂದಿನ ಕೆಲಸ ನಿರ್ವಹಿಸಲು ಅವಕಾಶ ಮಾಡಿದ್ದರು. ಈಗಲೂ ಸುಳ್ಯ ಪರಿಸರದ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago