Featured

ಸುಳ್ಯ: ಇಂದು ಮತ್ತೊಮ್ಮೆ ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ – Vishwanews24

ಸುಳ್ಯ: ಇಂದು ಮತ್ತೊಮ್ಮೆ ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ

ಸುಳ್ಯ: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನ ಹೇಳಿಕೊಂಡಿದ್ದಾರೆ.

ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ, ಅರಂತೋಡು, ತೊಡಿಕಾನ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಬೆಳಗ್ಗೆ 10.09ರ ವೇಳೆಗೆ ಭೂಮಿಯ ಒಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಸೋಫಾ, ಮಂಚ, ಪಾತ್ರೆ, ಪರಿಕರಗಳು ಅಲುಗಾಡಿವೆ ಎಂಬುದಾಗಿ ಜನರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಸಂಚರಿಸುತ್ತಿದ್ದವರಿಗೂ ಗುಂಡಿಗೆ ಬಿದ್ದಂತ ಅನುಭವ ಉಂಟಾಗಿದೆ.

ಕಳೆದೊಂದು ತಿಂಗಳಿನಿಂದೀಚೆಗೆ ಈ ಭಾಗಗಳಲ್ಲಿ ಹತ್ತಕ್ಕೂ ಹೆಚ್ಚು ಭಾರಿ ಭೂಕಂಪನದ ಅನುಭವವಾಗಿದ್ದು, ಭಾರೀ ಶಬ್ದದಿಂದ ಕೂಡಿದ ಕಂಪನಕ್ಕೆ ಜನ ಭಯದಿಂದಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಾಗಿ ಎತ್ತರದ ಗುಡ್ಡ ಪ್ರದೇಶಗಳಲ್ಲಿ, ಗುಡ್ಡದ ಅಡಿಭಾಗಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಜನರಿಗೆ ಭೂಕಂಪನ ಮತ್ತು ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿಯೂ ಎದುರಾಗಿದ್ದು, ಪ್ರತಿದಿನ ಇದೇ ಆತಂಕದಲ್ಲಿ ದಿನ ಕಳೆಯಬೇಕಾಗಿ ಬಂದಿದೆ ಎನ್ನುತ್ತಾರೆ ಈ ಭಾಗದ ನಿವಾಸಿಗಳು.

 

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

10 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

10 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

11 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

12 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

12 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

12 hours ago