Featured

ಸುಳ್ಯ: ಇಲಿ ಪಾಷಾಣ ಸೇವಿಸಿದ ತಾಯಿ, ಮಗ : ಮಗಸಾವು ; ತಾಯಿ ಗಂಭೀರ – vishwanews24

ಸುಳ್ಯ: ಇಲಿ ಪಾಷಾಣ ಸೇವಿಸಿದ ತಾಯಿ, ಮಗ : ಮಗಸಾವು ; ತಾಯಿ ಗಂಭೀರ

ಸುಳ್ಯ: ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎನ್ನುವಲ್ಲಿ ಭಾನುವಾರ ಸಂಭವಿಸಿದೆ.

ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಅವರ ಮಗ ನಿತಿನ್ (32) ಮೃತಪಟ್ಟವರು. ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಭಾನುವಾರ ಬೆಳಗ್ಗೆ ಇಬ್ಬರೂ ತೀವ್ರ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಮೃತ ನಿತಿನ್ ಐಟಿಐ ಪದವೀಧರರಾಗಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಅವರು ಒಂದು ವರ್ಷದ ಹಿಂದೆ ದೀಕ್ಷಾ ಅವರನ್ನು ವಿವಾಹವಾಗಿದ್ದರು. ದೀಕ್ಷಾ ಅವರು ಸ್ಥಳೀಯ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ಸಮಯದಲ್ಲಿ ದೀಕ್ಷಾ ತವರು ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ತಾಯಿ ಸುಲೋಚನಾ ಹಾಗೂ ಮಗ ನಿತಿನ್ ವಿಷ ಸೇವಿಸಿದ್ದರು ಎಂದು ವರದಿಯಾಗಿದೆ.

ಸ್ಥಳೀಯವಾಗಿ ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ನಿತಿನ್ ಎಲ್ಲರೊಡನೆ ಆತ್ಮೀಯವಾಗಿದ್ದರು. ನಿತಿನ್ ತಂದೆ ಕುಶಾಲಪ್ಪ ಗೌಡರ ಆರೋಗ್ಯವೂ ಸುಸ್ಥಿರವಾಗಿಲ್ಲ ಎಂದು ಹೇಳಲಾಗಿದೆ.

ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

30 minutes ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

3 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

5 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

5 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago