ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ – Vishwanews24

Featured, ದಕ್ಷಿಣ ಕನ್ನಡ

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ  

ಎಚ್.ಎಂ. ದಕ್ಷಿಣ ಕನ್ನಡದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಅವರು ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷವು ಬಿ ಫಾರಂ ನೀಡಲು ನಿರಾಕರಿಸಿದರೆ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ಸುಳ್ಯ: ನಂದ ಕುಮಾರ್‌ ಅಭಿಮಾನಿಗಳು ಸಲ್ಲಿಸಿರುವ ಬೇಡಿಕೆಗಳಿಗೆ ಕಾಂಗ್ರೆಸ್‌ ನಾಯಕರು ಯಾವುದೇ ರೀತಿಯಲ್ಲಿ ಸ್ಪಂದನೆ ನೀಡದೆ ಇದ್ದಲ್ಲಿ ಅಥವಾ ಸುಳ್ಯದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಂದ ಕುಮಾರ್‌ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಲಾಗುವುದು ಎಂದು ಅವರ ಅಭಿಮಾನಿಗಳು ನಿರ್ಧಾರ ಕೈಗೊಂಡಿದ್ದಾರೆ.

ನಿಂತಿಕಲ್ಲಿನಲ್ಲಿ ರವಿವಾರ ನಡೆದ ನಂದ ಕುಮಾರ್‌ ಅಭಿಮಾನಿ ಬಳಗದ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬಿ ಫಾರಂ ಕೊಡುವ ಮೊದಲು ಅಭ್ಯರ್ಥಿ ಬದಲಾಯಿಸಿ ನಂದ ಕುಮಾರ್‌ ಅವರಿಗೆ ನೀಡಬೇಕು. ಒಂದೇ ವೇಳೆ ಬೇಡಿಕೆ ಈಡೇರಿಸದಿದ್ದರೆ ನಂದ ಕುಮಾರ್‌ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸುವಂತೆ ಸಮಾವೇಶದಲ್ಲಿದ್ದ ಕಾರ್ಯಕರ್ತರು ಒಕ್ಕೊರಲಿನಿಂದ ಚಪ್ಪಾಳೆ ತಟ್ಟಿ, ಘೋಷಣೆ ಕೂಗಿ ಆಗ್ರಹಿಸಿದರು.

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಾಲಕ – Vishwanews24

ಕಾಂಗ್ರೆಸ್‌ನಿಂದ ಈಗಾಗಲೇ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.

ಈ ಮಧ್ಯೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಕಡಬದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಸಮಸ್ಯೆ ಯನ್ನು ಬಗೆಹರಿಸಲಾಗುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನಂದ ಕುಮಾರ್‌ ಜತೆ ಮಾತನಾಡಿದ್ದಾರೆ. ಟಿಕೆಟ್‌ ಕುರಿತಾಗಿ ಗೊಂದಲ ಇಲ್ಲ ಎಂದಿದ್ದಾರೆ.

ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ ಡಿಕೆಶಿ – Vishwanews24

Leave a Reply