ಎಚ್.ಎಂ. ದಕ್ಷಿಣ ಕನ್ನಡದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಅವರು ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷವು ಬಿ ಫಾರಂ ನೀಡಲು ನಿರಾಕರಿಸಿದರೆ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.
ಸುಳ್ಯ: ನಂದ ಕುಮಾರ್ ಅಭಿಮಾನಿಗಳು ಸಲ್ಲಿಸಿರುವ ಬೇಡಿಕೆಗಳಿಗೆ ಕಾಂಗ್ರೆಸ್ ನಾಯಕರು ಯಾವುದೇ ರೀತಿಯಲ್ಲಿ ಸ್ಪಂದನೆ ನೀಡದೆ ಇದ್ದಲ್ಲಿ ಅಥವಾ ಸುಳ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದ ಕುಮಾರ್ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಲಾಗುವುದು ಎಂದು ಅವರ ಅಭಿಮಾನಿಗಳು ನಿರ್ಧಾರ ಕೈಗೊಂಡಿದ್ದಾರೆ.
ನಿಂತಿಕಲ್ಲಿನಲ್ಲಿ ರವಿವಾರ ನಡೆದ ನಂದ ಕುಮಾರ್ ಅಭಿಮಾನಿ ಬಳಗದ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬಿ ಫಾರಂ ಕೊಡುವ ಮೊದಲು ಅಭ್ಯರ್ಥಿ ಬದಲಾಯಿಸಿ ನಂದ ಕುಮಾರ್ ಅವರಿಗೆ ನೀಡಬೇಕು. ಒಂದೇ ವೇಳೆ ಬೇಡಿಕೆ ಈಡೇರಿಸದಿದ್ದರೆ ನಂದ ಕುಮಾರ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸುವಂತೆ ಸಮಾವೇಶದಲ್ಲಿದ್ದ ಕಾರ್ಯಕರ್ತರು ಒಕ್ಕೊರಲಿನಿಂದ ಚಪ್ಪಾಳೆ ತಟ್ಟಿ, ಘೋಷಣೆ ಕೂಗಿ ಆಗ್ರಹಿಸಿದರು.
ಕಾಂಗ್ರೆಸ್‌ನಿಂದ ಈಗಾಗಲೇ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಈ ಮಧ್ಯೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಕಡಬದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಸಮಸ್ಯೆ ಯನ್ನು ಬಗೆಹರಿಸಲಾಗುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಂದ ಕುಮಾರ್ ಜತೆ ಮಾತನಾಡಿದ್ದಾರೆ. ಟಿಕೆಟ್ ಕುರಿತಾಗಿ ಗೊಂದಲ ಇಲ್ಲ ಎಂದಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…