Featured

ಸುಳ್ಯ  : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತ ; ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವು – Vishwanews24

ಸುಳ್ಯ  : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತ ; ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವು

ಸುಳ್ಯ : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ.

ಮೃತರನ್ನು ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಮತ್ತು ಆತನ ಸಹೋದರಿ ಮೋಕ್ಷಾ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎಲಿಮಲೆ ಮತ್ತು ಜಬಳೆ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಮಾರುತಿ ಕಾರು ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪುವ ವೇಳೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೂ ಸಾವನ್ನಪ್ಪಿದಳೆಂದು ತಿಳಿದು ಬಂದಿದೆ.

ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

18 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

21 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

22 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

24 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

24 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago