ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ಸಂಭವಿಸಿದೆ.
ಬಾಜಿನಡ್ಕದ ಚನಿಯ(50) ಮೃತ ದುರ್ದೈವಿ.
ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು ಚನಿಯರವರನ್ನು ನೀರಿನಿಂದ ಮೇಲೆತ್ತಿದ್ದದರಾದರೂ, ಅವರು ಆಗಲೇ ಮೃತಪಟ್ಟಿದ್ದರೆಂದು ತಿಳಿದುಬಂದಿದೆ.
ಬಳಿಕ ಅರಂತೋಡು ಸಹಕಾರಿ ಸಂಘದ ಆಂಬುಲೆನ್ಸ್ನಲ್ಲಿ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…