ಸುಳ್ಯ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ ಮತ್ತು ಪತಿ ಈ ಮೊದಲೇ ಮೃತಪಟ್ಟಿದ್ದು, ಬಳಿಕ ಒಂಟಿಯಾಗಿದ್ದರು. ದೇವರಲ್ಲಿ ಅಪಾರ ಭಕ್ತಿ ಹೊಂದಿದ್ದ ಅವರಿಗೆ ಫೆ. 27ರಂದು ಭಜನೆಗೆ ಬರಲು ಸಾಧ್ಯವಾಗಿರಲಿಲ್ಲ. ಫೆ. 28ರಂದು ಎರಡು ಭಜನೆ ಮಾಡಿದ ಬಳಿಕ ಮೂರನೇ ಭಜನೆ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…