ಸುಳ್ಯ :ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಪವಾಡಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ.
ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಕಾರಿನಲ್ಲಿ ಪಂಜ ಕಡೆಗೆ ಪ್ರಯಾಣಿಸುತ್ತಿದ್ದರು. ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದಾಗ, ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರು ನಜ್ಜುಗುಜ್ಜಾಗಿತ್ತು.
ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮರ ಬಿದ್ದ ಕಾರಣ ಸುಮಾರು ಅರ್ಧ ಗಂಟೆ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ನಂತರ ಸ್ಥಳೀಯ ನಿವಾಸಿಗಳು ಮರವನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…