ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು ಈ ಹಿಂದ ಅನ್ಯಧರ್ಮೀಯರಿಗೆ ಅವಕಾಶ ನೀಡಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನಿನ್ನ ಸಂಜೆ ನಡೆದ ಜೀರ್ಣೋದ್ಧಾರ ಮತ್ತು ಪುಮುಖರ ತುರ್ತು ಸಭೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಂತ ನಿರ್ಧಾರ ಕೈಗೊಳ್ಳಲಾಗಿದೆ.
ದೇವಸ್ಥಾನದ ವತಿಯಿಂದ ಸಂತೆ ವ್ಯಾಪಾರ ನಡೆಸಲು ಏಲಂ ಮಾಡುವ ಸ್ಥಳದಲ್ಲಿ ಹಿಂದುಯೇತರರಿಗೆ ಅವಕಾಶ ನೀಡುವುದಿಲ್ಲ, ಸಂತೆಯಲ್ಲಿ ವ್ಯಾಪಾರ ನಡೆಸಲು ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಂತೆಯಲ್ಲಿ ಈ ಹಿಂದಿನಂತೆ ಮುಕ್ತ ಅವಕಾಶ ನೀಡಲು ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಂತೆ ವ್ಯಾಪಾರಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದುತ್ವ ಸಂಘಟನೆಗಳು ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯನ್ನು ರಚಿಸಿ ದೇವಸ್ಥಾನಕ್ಕೆ, ಜೀರ್ಣೋದ್ಘಾರ ಸಮಿತಿ ಅಧ್ಯಕ್ಷರಿಗೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಹಾಗು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ನೀಡಿದರು.
ಈ ಹಿನ್ನಲೆಯಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕ.ವಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪುಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಲಿಂಗಪ್ಪ ಗೌಡ ಕೇರ್ವಳ, ಕೃಪಾಶಂಕರ ತುದಿಯಡ್ಕ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನಿಲ್ ಕೇರ್ಪಳ,ನಿಕೇಶ್ ಉಬರಡ್ಕ, ಜಿ.ಜಿ.ನಾಯಕ್, ಗೋಪಾಲಕೃಷ್ಣ, ಲತೀಶ್ ಗುಂಡ, ಗಿರೀಶ್ ಕಲ್ಲುಗದ್ದ, ರಜತ್ ಅಡ್ಯಾರ್ ಮತ್ತಿತರರು ಇದ್ದರು.
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…
ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ…