Featured

ಸುಳ್ಯ : ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ – Vishwanews24

ಸುಳ್ಯ ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ

ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು ಈ ಹಿಂದ ಅನ್ಯಧರ್ಮೀಯರಿಗೆ ಅವಕಾಶ ನೀಡಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನಿನ್ನ ಸಂಜೆ ನಡೆದ ಜೀರ್ಣೋದ್ಧಾರ ಮತ್ತು ಪುಮುಖರ ತುರ್ತು ಸಭೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಂತ ನಿರ್ಧಾರ ಕೈಗೊಳ್ಳಲಾಗಿದೆ.

ದೇವಸ್ಥಾನದ ವತಿಯಿಂದ ಸಂತೆ ವ್ಯಾಪಾರ ನಡೆಸಲು ಏಲಂ ಮಾಡುವ ಸ್ಥಳದಲ್ಲಿ ಹಿಂದುಯೇತರರಿಗೆ ಅವಕಾಶ ನೀಡುವುದಿಲ್ಲ, ಸಂತೆಯಲ್ಲಿ ವ್ಯಾಪಾರ ನಡೆಸಲು ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಂತೆಯಲ್ಲಿ ಈ ಹಿಂದಿನಂತೆ ಮುಕ್ತ ಅವಕಾಶ ನೀಡಲು ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಂತೆ ವ್ಯಾಪಾರಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದುತ್ವ ಸಂಘಟನೆಗಳು ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯನ್ನು ರಚಿಸಿ ದೇವಸ್ಥಾನಕ್ಕೆ, ಜೀರ್ಣೋದ್ಘಾರ ಸಮಿತಿ ಅಧ್ಯಕ್ಷರಿಗೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಹಾಗು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ನೀಡಿದರು.

ಈ ಹಿನ್ನಲೆಯಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕ.ವಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪುಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಲಿಂಗಪ್ಪ ಗೌಡ ಕೇರ್ವಳ, ಕೃಪಾಶಂಕರ ತುದಿಯಡ್ಕ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನಿಲ್ ಕೇರ್ಪಳ,ನಿಕೇಶ್ ಉಬರಡ್ಕ, ಜಿ.ಜಿ.ನಾಯಕ್, ಗೋಪಾಲಕೃಷ್ಣ, ಲತೀಶ್ ಗುಂಡ, ಗಿರೀಶ್ ಕಲ್ಲುಗದ್ದ, ರಜತ್ ಅಡ್ಯಾರ್‌ ಮತ್ತಿತರರು ಇದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago