Featured

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

1950 ರ ಮೇ 2 ರಂದು ಸುಳ್ಯದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಗ್ರಾಮೀಣ ಭಾಗದ ಜನರ ಕಷ್ಟಕ್ಕೆ ಮಿಡಿಯುತ್ತಿದ್ದ ಇವರು, 1989ರಲ್ಲಿ ತಮ್ಮ ಸ್ವಗ್ರಾಮವಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಐತಿಹಾಸಿಕ ಪಯಣವನ್ನು ಆರಂಭಿಸಿದರು.

ದುರ್ಗಮ ಕಾಡುಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ನೂರಾರು ಪ್ರದೇಶಗಳಿಗೆ ಗಿರೀಶ್ ಅವರ ತೂಗು ಸೇತುವೆಗಳು ಜೀವನಾಡಿಯಾದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇವರ ಈ ಅದ್ವಿತೀಯ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ 2017 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಶ್ರೀ’ ನೀಡಿ ಗೌರವಿಸಿತ್ತು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago