ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ
ಸುಳ್ಯ : ನಗರದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದರು. ಅವರ ಈ ಸಾಧನೆ ಕುಟುಂಬಕ್ಕೆ ಮಾತ್ರವಲ್ಲದೆ ಸುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿತ್ತು.
ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಭವಿಷ್ಯದ ಭರವಸೆಯ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದ ಅಭಿಜ್ಞಾ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಸಂತಾಪ ಸೂಚಿಸಿದ್ದಾರೆ.
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24
