ಸುಳ್ಯ :ಡಿಸೆಂಬರ್ 21 ರಂದು ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೂನಡ್ಕ ಬಳಿ, ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ನಂತರ ಲಾರಿ ಪಲ್ಟಿಯಾಗಿದೆ.
ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ ಪಾರಾಗಿದ್ದಾರೆ.
ಉರುಳಿಬಿದ್ದ ಲಾರಿಯನ್ನು ಜೆಸಿಬಿ ಬಳಸಿ ಮೇಲಕ್ಕೆತ್ತಲಾಯಿತು. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶಿವಮೊಗ್ಗ ಮೂಲದವರು ಎಂದು ವರದಿಯಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…