ಸುಳ್ಯ : ಶಬರಿಮಲೆಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ತೆರಳುತ್ತಿರುವ ವೇಳೆ ಅಪಾಯಕಾರಿ ತಿರುವಿನಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಯಿಂದ ಕೆಳಕ್ಕೆ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮಗ ಮೃತಟ್ಟು ಸಹಸವಾರ ತಂದೆ ತಂದೆ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ – ಸುಳ್ಯ ಮುಖ್ಯ ರಸ್ತೆಯ ಕಲ್ಲೋಣಿ ಎಂಬಲ್ಲಿ ಇಂದು ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಲ್ಯ ಮೋನಪ್ಪ ಅವರ ಪುತ್ರ ನಿಶಾಂತ್ (24) ಎಂದು ಗುರುತಿಸಲಾಗಿದೆ. ನಿಶಾಂತ್ ತಂದೆ ಮೋನಪ್ಪ ಅವರು ಗಂಭೀರ ಗಾಯಗೊಂಡಿದ್ದಾರೆ. ಶಬರಿಮಲೆ ಪ್ರಸಾದವನ್ನು ಸುಳ್ಯದ ಸಂಬಂಧಿಕರಿಗೆ ನೀಡಲು ತಂದೆ, ಮಗ ಬೈಕಿನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಥವಾ ಇನ್ನೊಂದು ವಾಹನಕ್ಕೆ ಅಪಘಾತ ಆಗುವುದನ್ನು ತಪ್ಪಿಸುವ ಭರದಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಶಂಕಿಸಲಾಗಿದೆ.
ನಿಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಸಹಸವಾರ ಮೋನಪ್ಪ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಬೆಳ್ಳಾರೆ ಪೊಲೀಸರು ಸ್ಳಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…