ಸುಳ್ಯ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಬಿಸಿಎಂ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸುಳ್ಯದ ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಈಕೆ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು.
ಸೋನಿಯಾ ಇಂದು ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…