Judge and gavel in courtroom
ಸುಳ್ಯ : ಬೆಳ್ಳಾರೆ ಗ್ರಾಮದ ದರ್ಖಾಸು ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ. ಸೆಲ್ವಕುಮಾರ್ ಆರೋಪಿ.
ಆರೋಪಿ ಸೆಲ್ವಕುಮಾರ್ ದರ್ಖಾಸು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, 2020ರ ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೊಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿದ್ದು, ಒಟ್ಟು 17 ಸಾಕ್ಷಿಗಳನ್ನು ಪರಿಶೀಲಿಸಲಾಗಿದೆ. ಬೆಳ್ಳಾರೆ ಪೊಲೀಸರು ಆರೋಪಿಯ ವಿರುದ್ಧ ಸಮಗ್ರ ಮತ್ತು ಸ್ಪಷ್ಟ ಸಾಕ್ಷ್ಯಗಳನ್ನು ಮಂಡಿಸಿದ್ದಾರೆ.
ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಾಧೀಶೆ ಸರಿತಾ ಡಿ., ಆರೋಪಿಯ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ಪೊಕ್ಸೋ ಕಾಯ್ದೆಯಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.20,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…