ಸುಳ್ಯ :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಇತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ.
ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಹೌದು, ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…