ಸುಳ್ಯ: ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಿ.ಡಿ.ಪಿ.ಒ. ರಶ್ಮಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ತಂಡ ಮದುವೆಯನ್ನು ತಡೆದ ಘಟನೆ ಕಂದಡ್ಕ ಎಂಬಲ್ಲಿ ನಡೆದಿದೆ.
ತಮಿಳು ಕಾಲನಿಯಲ್ಲಿನ ಪ್ರತಾಪ ಎಂಬವನಿಗೆ (26) ಜು.15 ರಂದು ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪೂರಕ ಮಾಹಿತಿ ಕೇಳಿದೆ. ಈ ಸಂದರ್ಭ ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಹುಡುಗಿಗೆ 18 ವರ್ಷ ತುಂಬಿದ ಬಳಿಕ ಇದೇ ಹುಡುಗನಿಗೆ ಮದುವೆ ಮಾಡಿಕೊಡಬಹುದು ಎಂದು ಮುಚ್ಚಳಿಕೆ ಬರೆದು ಅಪ್ರಾಪ್ತೆಯನ್ನು ಕುಟುಂಬ ಸಮೇತ ಮೈಸೂರಿಗೆ ಕಳುಹಿಸಲಾಗಿದೆ ಎಂದು ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ತಿಳಿಸಿದ್ದಾರೆ.
ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…