Judge and gavel in courtroom
ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.
ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟು ನೋವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…