ಮಂಗಳೂರು: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವುದು ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತರು ಎಂದು ಗುರುತಿಸಲಾಗಿದೆ. ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ.
ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ. ಮಗಳ ಸಾವಿನಲ್ಲಿ ಅನುಮಾನ ಇದೆ ಎಂದು ಮಧುಶ್ರೀ ತಾಯಿ ರತ್ನಾವತಿ ದೂರು ನೀಡಿದ್ದಾರೆ.
ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…