ಸುಳ್ಯ : ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿತ್ತು.
ಸುಧಾಕರರು ಸ್ವಲ್ಪ ಅಸೌಖ್ಯಕ್ಕೀಡಾಗಿರುವ ಹಿನ್ನಲೆಯಲ್ಲಿ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ. ಸ್ಥಳದಲ್ಲಿಯೇ ಬೆಂಕಿಯಲ್ಲಿ ದಹಿಸಲ್ಪಟ್ಟು ಸಾವನ್ನಪ್ಪಿದರೆಂದು ತಿಳಿದು ಬಂದಿದೆ. ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣ: NIA ದಾಳಿ ವೇಳೆ ಮದ್ದು ಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…