ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಮುರಿದು ಮನೆಯ ಅಂಗಳಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೈಚಾರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಫಿ ಪ್ರಗತಿ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಶಾಫಿ ಅವರ ಹಿರಿಯ ಸಹೋದರ ಹಸೈನಾರ್ ಅವರು ಮನೆಯ ಮೇಲ್ಛಾವಣಿಯಿಂದ ಇಳಿಯುವ ಮಳೆನೀರನ್ನು ಬಕೆಟ್‌ನಲ್ಲಿ ಸಂಗ್ರಹಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವು ಇದ್ದಕ್ಕಿದ್ದಂತೆ ಮುರಿದು ಅಂಗಳಕ್ಕೆ ಬೀಳುವುದನ್ನು ಗಮನಿಸಿದ ಹಸೈನಾರ್ ಕೂಡಲೇ ಅಲ್ಲಿಂದ ಸರಿದು ಅಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ಕೆಲವೇ ಕ್ಷಣಗಳ ಮೊದಲು ಶಾಫಿ ಅವರ ತಾಯಿ ಅದೇ ಸ್ಥಳದಲ್ಲಿ ನಿಂತಿದ್ದರು ಎನ್ನಲಾಗಿದೆ.
ತೆಂಗಿನ ಮರ ಮುರಿದು ಬಿದ್ದ ಈ ದೃಶ್ಯವು ಮನೆಯ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…