ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

Featured, ದಕ್ಷಿಣ ಕನ್ನಡ

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರಿ ಮೇ 7ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಪೋಷಕರು ನೀಡಿದ ದೂರಿನ ಮೇರೆಗೆ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರಡಿ ಪ್ರಕರಣ ದಾಖಲಾಗಿತ್ತು.

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಪ್ರಕರಣದ ತನಿಖೆ ಮುಂದುವರಿದ ವೇಳೆ ಜುಲೈ 22ರಂದು ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿದರು. ವಿಚಾರಣೆ ವೇಳೆ ಕಡಬ ನಿವಾಸಿ ಧನುಷ್ (18) ಎಂಬಾತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಪೊಕ್ಸೊ (POCSO) ಕಾಯ್ದೆಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಆರೋಪಿ ಧನುಷ್‌ನನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply