Featured

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ – ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು – Vishwanews24

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು

ಸುಳ್ಯ,: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಸೀರೆ ಕಟ್ಟಿ ಅದರಲ್ಲಿ ಅನಾರೋಗ್ಯಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಗೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಗಳಿಗೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಆಂಬುಲೆನ್ಸ್‌ ಬರಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಆಡಳಿತ ವರ್ಗಕ್ಕೆ ತಲುಪಿಸುವ ಉದ್ದೇಶದಿಂದ ಈ ವೀಡಿಯೋ ಮಾಡಲಾಗಿತ್ತು. ಆದರೆ ಗುರುವಾರ ಅದೇ ಮನೆಗೆ ರಸ್ತೆಯಲ್ಲಿ ಜೀಪು ಹೋಗಿದ್ದು, ತೆಂಗಿನಕಾಯಿ ತುಂಬಿಸಿಕೊಂಡು ಹಿಂತಿರುಗಿದೆ. ಇದನ್ನು ಗಮನಿಸಿದ ಸ್ಥಳೀಯರು ಜೀಪು ಮನೆಗೆ ತೆರಳಿದ ಮತ್ತು ಹಿಂತಿರುಗಿದ ವೀಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ವಿಪರೀತ ಮಳೆ ಬಿದ್ದರೂ ಜೀಪು ಮನೆಯವರೆಗೆ ಬಂದು ತೆಂಗಿನಕಾಯಿ ಕೊಂಡೊಯ್ದಿದೆ. ಆದರೆ ವೃದ್ದೆಯನ್ನು ಮರದ ಕೊಂಬೆಯಲ್ಲಿ ಸಾಗಿಸಲಾಗಿದೆ. ಇದು ಸರಿಯಲ್ಲ ಎಂದು ಸ್ಥಳೀಯರು ಮನೆಯವರನ್ನು ಪ್ರಶ್ನಿಸುತ್ತಿರುವುದು ಕೂಡಾ ವೀಡಿಯೋದಲ್ಲಿ ದಾಖಲಾಗಿದೆ. ಇದೇ ವೇಳೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ಸದಸ್ಯರು ಕೂಡಾ ಕುಟುಂಬದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಹೃದಯಾಘಾತದಿಂದ ಪತಿ ಸಾವು ..ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ..

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago