ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ ಮಗ ನಿರಂಜನಾಕ್ಷ(47) ಸೆ.7ರಂದು ಮರ ಕತ್ತರಿಸುವ ವೇಳೆ ಹೃದಯಘಾತವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ತೊಡಿಕಾನ ಮೂಲದ ನಿರಂಜನ್ ಅವರು ಬೆಳಿಗ್ಗೆ ಕಲ್ಲುಗುಂಡಿಗೆ ರಬ್ಬರ್ ಮರ ಕತ್ತರಿಸುವ ಕೆಲಸಕ್ಕೆ ಹೋಗಿದ್ದರು. ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ರಿಕ್ಷಾದಲ್ಲಿ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆತರಲಾಯಿತು.
ಅಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಲ್ಲುಗುಂಡಿ ಆಂಬುಲೆನ್ಸ್‌ನಲ್ಲಿ ನಿರಂಜನ್ ಅವರನ್ನು ಸುಳ್ಯಕ್ಕೆ ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಸ್ವಸ್ಥಗೊಂಡ ನಿರಂಜನ್ ಅವರಿಗೆ ಸ್ಥಳೀಯರು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಅವರು ನುರಿತ ಮರ ಕಟಾವು ಕಾರ್ಮಿಕರಾಗಿದ್ದರು ಎಂದು ತಿಳಿದು ಬಂದಿದೆ. ಸಾವಿನ ನಿಖರ ಕಾರಣಕ್ಕೆ ವೈದ್ಯಕೀಯ ವರದಿ ಬಳಿಕ ತಿಳಿದು ಬರಲಿದೆ. ಮೃತರು ತಾಯಿ,ಪತ್ನಿ ಇಬ್ಬರು ಗಂಡು ಮಕ್ಕಳು,ಸಹೋದರ ಸಹೋದರಿಯನ್ನು ಅಗಲಿದ್ದಾರೆ.
ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ…
ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ…
ಸೆ.20 ರಿಂದ 108 ಸೇವೆ ಬಂದ್ ; ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್.. 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ಬೆಂಗಳೂರು:…
ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ ಭಾರತೀಯ ಜನತಾ ಪಾರ್ಟಿ…
ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…
ಉಡುಪಿ: ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…