ಸುಳ್ಯ: ಮಹಿಳೆಯೋರ್ವರ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಜೂನ್ 11ರಂದು ಬಂಧಿಸಿದ್ದಾರೆ.
ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ.
ಬೆಳ್ಳಾರೆಯ ಪಾಟಾಜೆ ನಿವಾಸಿ ನಳಿನಿ(55) ಮೃತ ಮಹಿಳೆಯಾಗಿದ್ದು, ನಳಿನಿ ಅವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ಹಿನ್ನೆಲೆ
ನಳಿನಿ ಅವರು 2 ವರ್ಷಗಳ ಹಿಂದೆ ಮನೆ ಬಿಟ್ಟಿದ್ದು, ವಾರಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದರು. ಬಸ್ ನಿಲ್ದಾಣ, ಮತ್ತಿತರ ಕಡೆಗಳಲ್ಲಿ ನಳಿನಿ ಮಲಗುತ್ತಿದ್ದರು. ಇನ್ನು ಆರೋಪಿ ಜಯರಾಮ ನಾಯ್ಕ ಕೂಡ ಮನೆ ಬಿಟ್ಟಿದ್ದು, ಆತನೂ ಕೂಡ ಬಸ್ ನಿಲ್ದಾಣ, ಮಾರುಕಟ್ಟೆಯಲ್ಲಿ ರಾತ್ರಿ ಉಳಿಯುತ್ತಿದ್ದ. ಆರೋಪಿ ಜಯರಾಮ ಮದ್ಯವ್ಯಸನಿಯಾಗಿದ್ದನು. ನಳಿನಿ ಹಾಗೂ ಜಯರಾಮ ಕೊಲೆ ನಡೆದ ರಾತ್ರಿ ಬೆಳ್ಳಾರೆಯ ಎಪಿಎಂಸಿ ಮಾರುಕಟ್ಟೆ ಬಳಿ ತಂಗಿದ್ದರು. ಮಧ್ಯರಾತ್ರಿ ಎದ್ದು ಹೊರಗಡೆ ಹೋಗುವಾಗ ನಳಿನಿ ಅವರ ಕಾಲಿಗೆ ಜಯರಾಮ ತುಳಿದು ಹೋಗಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕುಡಿತದ ಅಮಲಿನಲ್ಲಿದ್ದ ಜಯರಾಮ ಕಲ್ಲನ್ನು ತಂದು ನಳಿನಿ ಅವರ ತಲೆಗೆ ಎತ್ತಿ ಹಾಕಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ನಳಿನಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…