ಸುಳ್ಯ : ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಯುವತಿಯ ಅಂಗಾಂಗವನ್ನು ದಾನ ಮಾಡುವ ಮೂಲಕ ಯುವತಿಯ ತಾಯಿ ಸಾರ್ಥಕತೆ ಮರೆದಿದ್ದಾರೆ.
ಮೃತ ಸಿಂಧು ಶೆಟ್ಟಿ ಸುಳ್ಯದ ರಥಬೀದಿ ನಿವಾಸಿ ಮಮತಾ ಶೆಟ್ಟಿ ಅವರ ಪುತ್ರಿಯಾಗಿದ್ದು, ಸುಳ್ಯ ಸರ್ಕಾರಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿ, ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಉದ್ಯೋಗದಲ್ಲಿದ್ದರು. ಡಿಸೆಂಬರ್ 16ರಂದು ಬ್ಯಾಂಕ್ ಕೆಲಸ ಮುಗಿಸಿ ಬಸ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸಿಂಧು ಅವರಿಗೆ ತೀವ್ರ ತಲೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾತ್ತು.
ಈ ವೇಳೆ ಅವರಿಗೆ ನರದ ಸಮಸ್ಯೆ ಉಂಟಾಗಿರುವುದು ಪತ್ತೆಯಾಯಿತು. ಮರುದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮೆದುಳಿನ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಯಿತು. ಒಮ್ಮೆ ಪ್ರಜ್ಞೆ ಬಂದಿತ್ತಾದರೂ ಬಳಿಕ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಕೋಮಾಗೆ ಜಾರಿದ್ದರು.
ಯುವತಿಯ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡರೂ, ಯಂತ್ರಗಳ ಸಹಾಯದಿಂದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್, ಕಣ್ಣುಗಳು ಮುಂತಾದ ಪ್ರಮುಖ ಅಂಗಾಂಗಳನ್ನು ಉಳಿಸಲಾಗಿದೆ. ಈ ಅಂಗಗಳನ್ನು ದಾನ ಮಾಡುವುದರಿಂದ ಇತರರಿಗೆ ಜೀವದಾನ ಮಾಡಿದಂತಾಗುತ್ತದೆ ಎಂದು ಮೃತ ಯುವತಿಯ ತಾಯಿ ಮಮತಾ ಅವರು ಮನೆಯ ಉಳಿದವರೊಂದಿಗೆ ಚರ್ಚಿಸಿ ಅಂಗಾಂಗಗಳನ್ನು ದಾನಮಾಡುವ ನಿರ್ಧಾರ ಕೈಗೊಂಡರು. ಅದರಂತೆ ಮೈಸೂರಿನ ಅಪೋಲೋ ಆಸ್ಪತ್ರೆ, ನಿಟ್ಟೆ, ಎ.ಜೆ. ಮತ್ತು ಕೆ.ಎಂ.ಸಿ. ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಲಾಯಿತು.
ಅಂಗಾಂಗ ದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಂಧು ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಸಿದ್ದಕಟ್ಟೆಯಲ್ಲಿರುವ ಮಾವ ರಾಜೇಶ್ ಅವರ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…