Featured

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ

ಸುಳ್ಯ : ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ ನಾದಿನಿಯನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕೆದಂಬಾಡಿ ನಿವಾಸಿ ಜುಬೈದಾ ಅವರ ಮಗಳು ಫಾತಿಮತ್‌ ನಿಶಾನ ಮೃತಪಟ್ಟ ವಿವಾಹಿತೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಲವಿ , ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. ಎಂಬುವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಫಾತಿಮತ್‌ ನಿಶಾನ ಅವರ ವಿವಾಹ ನೆರವೇರಿತ್ತು. ಜುಲೈ 18ರ ರಾತ್ರಿ ನಿಶಾನ ತಮ್ಮ ತಾಯಿ ಜುಬೈದಾ ಅವರಿಗೆ ಫೋನ್ ಮಾಡಿ, “ಗಂಡನ ಮನೆಯಲ್ಲಿ ಮಾವ, ಅತ್ತೆ ಹಾಗೂ ನಾದಿನಿ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದರು. ತಾಯಿ-ಮಗಳ ಸಂಭಾಷಣೆ ನಡೆಯುತ್ತಿದ್ದಂತೆಯೇ ಮಧ್ಯ ಪ್ರವೇಶಿಸಿದ ಮಾವ ಅಲವಿ, ನಿಶಾನ ಕೈಯಿಂದ ಫೋನ್ ಕಸಿದುಕೊಂಡು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ತಾಯಿ ಜುಬೈದಾ ಅವರಿಗೆ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಕರೆ ಬೆನ್ನಲ್ಲೇ ಆತಂಕಗೊಂಡ ತಾಯಿ ಜುಬೈದಾ ಮಗಳನ್ನು ನೋಡಲು ಆಕೆಯ ಮನೆಗೆ ಹೊರಟಾಗ, ನಿಶಾನ ಮೃತಪಟ್ಟಿರುವ ಸುದ್ದಿ ತಿಳಿದುಬಂದಿದೆ. ಕೌಟುಂಬಿಕ ಕಿರುಕುಳ ನೀಡಿ ಆರೋಪಿಗಳು ಸೇರಿಕೊಂಡೇ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ತಾಯಿ ಜುಬೈದಾ ಸುಳ್ಯ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಗೃಹ ಹಿಂಸಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಜುಲೈ 22ರಂದು ಮೂವರನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago