Featured

ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು – Vishwanews24

ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು

ಸುಳ್ಯ: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಇಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ.

ಕಳೆದ 30 ವರ್ಷಗಳಿಂದ ಹೊಳೆ ದಾಟಲು ಇರುವ ಏಕೈಕ ಮಾರ್ಗವಾಗಿರುವ ಮರದ ಸೇತುವೆ ಮಳೆಗಾಲದಲ್ಲಿ ಆಗಾಗ ಹಾನಿಗೊಳಗಾಗುತ್ತದೆ. ಇದರಿಂದ ಗ್ರಾಮಸ್ಥರು ಐದು ಕಿಲೋಮೀಟರ್ ದೂರದಲ್ಲಿರುವ ಪಟ್ಟಣಕ್ಕೆ ಬರಲು ಪರ್ಯಾಯ ಮಾರ್ಗದಲ್ಲಿ ಹೋಗಬೇಕಾದ ಅನಿವಾರ್ಯತೆ ಇದೆ. ಈ ಪರ್ಯಾಯ ಮಾರ್ಗವು 15 ಕಿಲೋಮೀಟರ್‌ಗೆ ವಿಸ್ತರಿಸುವುದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ನಿವಾಸಿಗಳಿಗೆ ತೊಂದರೆಯಾಗುತ್ತಿದೆ.

ಇನ್ನು ಅಸ್ತಿತ್ವದಲ್ಲಿರುವ ಮರದ ಸೇತುವೆಯ ಸುರಕ್ಷತೆಯ ಬಗ್ಗೆ ಚಿಕ್ಕ ಮಕ್ಕಳ ಪೋಷಕರು ವಿಶೇಷವಾಗಿ ಕಾಳಜಿ ವಹಿಸುತ್ತಾರೆ. ಸೇತುವೆಯ ಕೊರತೆಯಿಂದಾಗಿ ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕೂ ಅಡ್ಡಿಯಾಗಿದ್ದು, ಗ್ರಾಮಸ್ಥರ ಸ್ಥಿತಿ ಹೇಳ ತೀರದಂತಿದೆ. ಇದರಿಂದ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅರಮನೆಗಯ ಸೇತುವೆ ಬೇಡಿಕೆ ಇಡೇರುವ ತನಕ ಮತದಾನ ಬಹಿಷ್ಕರಿಸುವುದಾಗಿ ಹೇಳಿ ಮನೆ ಮನೆಗಳಲ್ಲಿ ಬ್ಯಾನರ್, ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ ಎಂದರು.

ಇನ್ನು ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಹಿಷ್ಕಾರದಿಂದ ತಮ್ಮ ಸಂಕಷ್ಟದ ಬಗ್ಗೆ ಗಮನ ಹರಿಸಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂಬುದು ನಿವಾಸಿಗಳ ಆಶಯವಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

51 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago