ಸುಳ್ಯ,: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ.
ಆರೋಪಿಗಳನ್ನು ದೀಕ್ಷಿತ್ (ಬಿಬಿಎ) ಮತ್ತು ಧನುಷ್(ಬಿಬಿಎ ) ಪ್ರಜ್ವಲ್, (ಅಂತಿಮ ವರ್ಷದ ಬಿಬಿಎ) ತನುಜ್ (ಅಂತಿಮ ವರ್ಷದ ಬಿಕಾಂ) ಅಕ್ಷಯ್ (ದ್ವಿತಿಯ ವರ್ಷದ ಬಿಕಾಂ) ಮೋಕ್ಷಿತ್ (ಅಂತಿಮ ವರ್ಷದ ಬಿಕಾಂ) ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಮಹಮ್ಮದ್ ಸನೀಫ್ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ,ಕಾಂ ಪದವಿ ಕಲಿಯುತ್ತಿದ್ದು, ಆತನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಸ್ನೇಹ ಸಂಬಂಧವಿತ್ತು. ಇದು ಕೆಲ ಸಹಪಾಠಿಗಳಿಗೆ ಹಿಡಿಸುತ್ತಿರಲಿಲ್ಲ.
ಈ ಹಿನ್ನೆಲೆ ಆ.30 ರಂದು ಬೆಳಗ್ಗೆ 10:30ಕ್ಕೆ ಮಹಮ್ಮದ್ ಸನೀಫ್ ತರಗತಿಗೆ ಬಂದ ದೀಕ್ಷಿತ್ ಮತ್ತು ಧನುಷ್ ಎಂಬುವವರು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್‌ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇನ್ನುಳಿದ ಆರೋಪಿಗಳು ಈತನ ಕಾಲರ್ ಪಟ್ಟಿ ಹಿಡಿದು ನೀನು ಆಕೆಯೊಂದಿಗೆ ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.
ನಂತರ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿ ಇನ್ನು ಮುಂದಕ್ಕೆ ಆಕೆಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ವಿದ್ಯಾರ್ಥಿ ಸುಳ್ಯ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…