ಸುಳ್ಯ : 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24
ಸುಳ್ಯ : 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಸುಳ್ಯ : 2ನೇ ತರಗತಿ ವಿಧ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ, ಕುಂಟಿಕಾನ ನಿವಾಸಿ ಮೋಕ್ಷಿತ್ ಕೆ ಸಿ ಎಂಬ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮೋಕ್ಷಿತ್ ಎಂದಿನಂತೆ ಶಾಲೆಗೆ ಬಂದಿದ್ದಾನೆ. ಮಧ್ಯಾಹ್ನದ ಹೊತ್ತಿಗೆ ಜ್ವರ ಕಾಣಿಸಿಕೊಂಡಿದೆ. ಕೂಡಲೇ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ಮುಟ್ಟಿಸಿದ್ದಾರೆ. ತಂದೆ ಚಂದ್ರಶೇಖರ ಆಚಾರ್ಯ ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದ. ಬಾಲಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ, ತುರ್ತು ಚಿಕಿತ್ಸಾ ಘಟಕದಲ್ಲಿರಿಸಿ ಜೀವ ಉಳಿಸಲು ಸತತವಾಗಿ ಪ್ರಯತ್ನಿಸಿದ್ದಾರೆ. ಆದರೆ ಪ್ರಯೋಜನವಾಗಲಿಲ್ಲ. ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಅನಾವಶ್ಯಕ ವಾದ-ವಿವಾದ.. ನೋಡಿ ಇಂದಿನ ದಿನ ಭವಿಷ್ಯ – Vishwanews24
