ಶೃಂಗೇರಿ: ಸಿ.ಟಿ.ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕಥೆ ಹೆಣೆಯುವುದರಲ್ಲಿ ನಿಸ್ಸೀಮ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ.
ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಸಂಬಂಧ ಮಾಧ್ಯಮದವರ ಪ್ರಶ್ನಗೆ ಪ್ರತಿಕ್ರಿಯಿಸಿದ ಅವರು, “ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…