Featured

ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಗೆ ಭೀಕರ ಹಲ್ಲೆ ; ಕಾನೂನು ಸುವ್ಯವಸ್ಥೆಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ? : ಅನ್ವರ್ ಸಾದತ್ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್’ಗಿರಿ ಮಿತಿ ಮೀರುತ್ತಿದ್ದು,ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆಗಳಿವೆ : SDPI ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್’ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟಶಕ್ತಿಗಳು ಶ್ರಮಿಸುತ್ತಿವೆ. ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದ ಅವರು, ಇತ್ತೀಚೆಗೆ ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ಯುವಕನಿಗೆ ಥಳಿಸಿದ್ದಾರೆ. ಆ ನಂತರ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗೂಂಡಾಗಳು ನಿನ್ನೆ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಭೀಕರವಾಗಿ ಹಲ್ಲೆ ನಡೆಸುವ ಮೂಲಕ ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿಯನ್ನು ರಾಜಾರೋಷವಾಗಿ ಮಾಡಿದ್ದಾರೆ. ಗಂಭೀರ ಸ್ವರೂಪದ ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡದೆ ಪೊಲೀಸರು ಬಿಟ್ಟು ಕಳಿಸಿದ್ದಾರೆ.ಇದರ ವಿರುದ್ಧ ಅವರ ಸಂಬಂಧಿಕರು ಸುಮೋಟೋ ಕೇಸು ದಾಖಲಿಸುವಂತೆ ಪೊಲೀಸರಲ್ಲಿ ಕೇಳಿಕೊಂಡಾಗ ನಮಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ಇಲ್ಲ ಎಂದು ಹೇಳಿರುವುದು ಪೊಲೀಸರ ಅಸಹಾಯಕತೆ ಮತ್ತು ಒತ್ತಡವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಈ ಘಟನೆ ಒಂದು ಗಂಭೀರ ಸ್ವರೂಪದ ವಿಚಾರವಾಗಿದೆ. ಆದ್ದರಿಂದ ಜಿಲ್ಲಾಡಳಿತ, ಮಂಗಳೂರು ನಗರ ಪೋಲಿಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಬಸ್ಸು ನಿರ್ವಾಹಕ ಸೇರಿದಂತೆ ಘಟನೆಗೆ ಸಂಬಂಧಪಟ್ಟ ಎಲ್ಲಾ ಆರೋಪಿಗಳನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಅನ್ವರ್ ಸಾದತ್ ಬಜತ್ತೂರು ಒತ್ತಾಯಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

8 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

9 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

9 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

9 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

10 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

10 hours ago