Featured

ಸುಳ್ಳು ಸುದ್ದಿಯ ಸೃಷ್ಟಿಕರ್ತರು , ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ : ಸಿಎಂ ಸಿದ್ದರಾಮಯ್ಯ – Vishwanews24

ಮುಸ್ಲಿಮರ ಓಟು ಸಾಕು‌ : ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ವೈರಲ್

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು:ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago