ದಿಬ್ರುಗ: ಮುಂಬರುವ ವಿಧಾನಸಭಾ ಚುನಾವಣೆಯ ಕುರಿತಾದಂತೆ ಅಸ್ಸಾಂ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸಿಎಎಯನ್ನು ಹಿಂದೆಗೆಯಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ.
ಅಸ್ಸಾಂನ ದಿಬ್ರುಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ “ಬಿಜೆಪಿಯು ಅಸ್ಸಾಂನ ಚಹಾ ಕಾರ್ಮಿಕರಿಗೆ 351ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ 167ರೂ.ಯನ್ನು ನೀಡಲಾಗುತ್ತಿದೆ. ನಾನು ನರೇಂದ್ರ ಮೋದಿಯಲ್ಲ. ನಾನು ಸುಳ್ಳು ಹೇಳುವುದಿಲ್ಲ. ನಾವು ಇಂದು ನಿಮಗೆ ೫ ಭರವಸೆಗಳನ್ನು ನೀಡುತ್ತಿದ್ದೇವೆ”
“ಅಸ್ಸಾಂನ ಚಹಾ ಕಾರ್ಮಿಕರಿಗೆ 365ರೂ., ಸಿಎಎ ಕಾಯ್ದೆಯನ್ನು ರದ್ದುಪಡಿಸುತ್ತೇವೆ. 5 ಲಕ್ಷದಷ್ಟು ಉದ್ಯೋಗಗಳ ನಿರ್ಮಾಣ, 200 ಯುನಿಟ್ ಗಳಷ್ಟು ಉಚಿತ ವಿದ್ಯುತ್ ಮತ್ತು ಗೃಹಿಣಿಯರಿಗೆ 2,000ರೂ. ನೀಡಲಾಗುವುದು” ಎಂದು ಸಮಾವೇಶದಲ್ಲಿ ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಯುವಜನತೆಗೆ ಉದ್ಯೋಗ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಯುವಕರು ರಾಜಕಾರಣಕ್ಕೆ ಧುಮುಕಬೇಕು. ಉತ್ತಮ ಅಸ್ಸಾಂಗಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಟೀ ವರ್ಕ್ರ್ ಗಳ ಕಲ್ಯಾಣಕ್ಕೆ ಕಾಂಗ್ರೆಸ್ ಹೊಸ ಯೋಜನೆಗಳನ್ನು ರೂಪಿಸಲಿದೆ. ನಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಬಂಡವಾಳ ಹರಿದು ಬಂದಿತ್ತು. ಈಗ ಎಲ್ಲವೂ ನಿಂತ ನೀರಾಗಿದೆ ಎಂದು ಬಿಜೆಪಿಯನ್ನು ಟೀಕಿಸಿದರು.
ಇದನ್ನೂ ಓದಿ : ‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…