Featured

ಸುಳ್ಳು ಹೇಳಲು ನಾನು ಮೋದಿಯಲ್ಲ , ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿಎಎ ಹಿಂದೆಗೆಯಲಾಗುವುದು : ರಾಹುಲ್‌ ಗಾಂಧಿ -Vishwanews24

ಸುಳ್ಳು ಹೇಳಲು ನಾನು ಮೋದಿಯಲ್ಲ , ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿಎಎ ಹಿಂದೆಗೆಯಲಾಗುವುದು : ರಾಹುಲ್‌ ಗಾಂಧಿ -Vishwanews24

ದಿಬ್ರುಗ: ಮುಂಬರುವ ವಿಧಾನಸಭಾ ಚುನಾವಣೆಯ ಕುರಿತಾದಂತೆ ಅಸ್ಸಾಂ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸಿಎಎಯನ್ನು ಹಿಂದೆಗೆಯಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ.

ಅಸ್ಸಾಂನ ದಿಬ್ರುಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್‌ ಗಾಂಧಿ “ಬಿಜೆಪಿಯು ಅಸ್ಸಾಂನ ಚಹಾ ಕಾರ್ಮಿಕರಿಗೆ 351ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ 167ರೂ.ಯನ್ನು ನೀಡಲಾಗುತ್ತಿದೆ. ನಾನು ನರೇಂದ್ರ ಮೋದಿಯಲ್ಲ. ನಾನು ಸುಳ್ಳು ಹೇಳುವುದಿಲ್ಲ. ನಾವು ಇಂದು ನಿಮಗೆ ೫ ಭರವಸೆಗಳನ್ನು ನೀಡುತ್ತಿದ್ದೇವೆ”

ಇದನ್ನೂ ಓದಿ : ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ -Vishwanews24

“ಅಸ್ಸಾಂನ ಚಹಾ ಕಾರ್ಮಿಕರಿಗೆ 365ರೂ., ಸಿಎಎ ಕಾಯ್ದೆಯನ್ನು ರದ್ದುಪಡಿಸುತ್ತೇವೆ. 5 ಲಕ್ಷದಷ್ಟು ಉದ್ಯೋಗಗಳ ನಿರ್ಮಾಣ, 200 ಯುನಿಟ್‌ ಗಳಷ್ಟು ಉಚಿತ ವಿದ್ಯುತ್‌ ಮತ್ತು ಗೃಹಿಣಿಯರಿಗೆ 2,000ರೂ. ನೀಡಲಾಗುವುದು” ಎಂದು ಸಮಾವೇಶದಲ್ಲಿ ಹೇಳಿಕೆ ನೀಡಿದ್ದಾರೆ.

ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಯುವಜನತೆಗೆ ಉದ್ಯೋಗ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಯುವಕರು ರಾಜಕಾರಣಕ್ಕೆ ಧುಮುಕಬೇಕು. ಉತ್ತಮ ಅಸ್ಸಾಂಗಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಟೀ ವರ್ಕ್ರ್ ಗಳ ಕಲ್ಯಾಣಕ್ಕೆ ಕಾಂಗ್ರೆಸ್ ಹೊಸ ಯೋಜನೆಗಳನ್ನು ರೂಪಿಸಲಿದೆ. ನಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಬಂಡವಾಳ ಹರಿದು ಬಂದಿತ್ತು. ಈಗ ಎಲ್ಲವೂ ನಿಂತ ನೀರಾಗಿದೆ ಎಂದು ಬಿಜೆಪಿಯನ್ನು ಟೀಕಿಸಿದರು.

ಇದನ್ನೂ ಓದಿ : ‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago