ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ.
ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾರೆ. ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮೀಜಿಯ 32 ನೇ ಸಂಸ್ಮರಣೋತ್ಸವದಲ್ಲಿ ಭಾಗವಹಿಸಲು ಆರೋಪಿ ಇಮ್ಮಡಿ ಮಹದೇವಸ್ವಾಮಿ ಮುಂದಾಗಿದ್ದರು. ಆರೋಪಿ ಭಾಗವಹಿಸಿದರೆ ಪ್ರತಿಭಟನೆ ಮಾಡುವುದಾಗಿ ಸಂತ್ರಸ್ತರು ಹಾಗೂ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ಸಾಲೂರು ಮಠದ ಆವರಣ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಪೊನ್ನಾಚಿ ಮಹದೇವಸ್ವಾಮಿ ಮನವಿ ಮಾಡಿದ್ದರು.
ಸಾಲೂರು ಮಠದ ಮಹದೇಶ್ವರಸ್ವಾಮಿ ಎಜುಕೇಶನ್ ಸೊಸೈಟಿಯ ಸದಸ್ಯರಾಗಿದ್ದಾರೆ. ಇಮ್ಮಡಿ ಮಹದೇವಸ್ವಾಮಿ ಭಾಗಹಿಸಿದರೆ ಗಲಭೆ, ಶಾಂತಿಭಂಗ ಉಂಟಾಗುವ ಸಾಧ್ಯತೆಯಿದೆ. ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮುಂದಿನ ಆದೇಶದವರೆಗೂ ಮಹದೇಶ್ವರ ಬೆಟ್ಟಕ್ಕೆ ಆರೋಪಿಗೆ ಪ್ರವೇಶ ನಿಷೇಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…