Featured

ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ – vishwanews24

ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ‌ಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ.

ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾರೆ. ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮೀಜಿಯ 32 ನೇ ಸಂಸ್ಮರಣೋತ್ಸವದಲ್ಲಿ ಭಾಗವಹಿಸಲು ಆರೋಪಿ ಇಮ್ಮಡಿ ಮಹದೇವಸ್ವಾಮಿ ಮುಂದಾಗಿದ್ದರು. ಆರೋಪಿ ಭಾಗವಹಿಸಿದರೆ ಪ್ರತಿಭಟನೆ ಮಾಡುವುದಾಗಿ ಸಂತ್ರಸ್ತರು ಹಾಗೂ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ಸಾಲೂರು ಮಠದ ಆವರಣ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಪೊನ್ನಾಚಿ ಮಹದೇವಸ್ವಾಮಿ ಮನವಿ ಮಾಡಿದ್ದರು.

ಸಾಲೂರು ಮಠದ ಮಹದೇಶ್ವರಸ್ವಾಮಿ ಎಜುಕೇಶನ್ ಸೊಸೈಟಿಯ ಸದಸ್ಯರಾಗಿದ್ದಾರೆ. ಇಮ್ಮಡಿ ಮಹದೇವಸ್ವಾಮಿ ಭಾಗಹಿಸಿದರೆ ಗಲಭೆ, ಶಾಂತಿಭಂಗ ಉಂಟಾಗುವ ಸಾಧ್ಯತೆಯಿದೆ. ಆರೋಪಿ ಇಮ್ಮಡಿ ಮಹದೇವಸ್ವಾಮಿ‌ಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮುಂದಿನ ಆದೇಶದವರೆಗೂ ಮಹದೇಶ್ವರ ಬೆಟ್ಟಕ್ಕೆ ಆರೋಪಿಗೆ ಪ್ರವೇಶ ನಿಷೇಧಿಸಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago