ಉಡುಪಿ :ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡರಾದ ನಾಡೋಜ ಡಾ ಜಿ ಶಂಕರ್ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾಗಳನ್ನು ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…