ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣದಲ್ಲಿ ರೂ. 4೦,೦೦,೦೦೦ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ನ್ಯಾಷನಲ್ ಇನ್ಶುರೆನ್ಸ್ ಹಿರಿಯ ವಿಭಾಗೀಯ ಪ್ರಬಂಧಕರಾದ ಶ್ರೀಮತಿ ಪ್ರತಿಭಾ ಶೆಟ್ಟಿಯವರನ್ನು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಆಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ಸನ್ಮಾನಿಸಿ ಅಭಿನಂದಿಸಲಾಯಿತು.
ಅಭಿನ0ದನೆ ಸ್ವೀಕರಿಸಿದ ಪ್ರತಿಭಾ ಶೆಟ್ಟಿಯವರು ವಿಮಾ ಪರಿಹಾರ ಮಂಜೂರಾತಿ ಪ್ರಕ್ರಿಯೆಯಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ಹಾಗೂ ಮೀನುಗಾರರ ಸಂಘದ ಪೂರಕ ಸಹಕಾರದಿಂದ ಈ ಗರಿಷ್ಠ ಮೊತ್ತ ಪರಿಹಾರ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ, ಸುವರ್ಣ ತ್ರಿಭುಜ ಬೋಟ್ ವಿಮಾ ಪರಿಹಾರ ಮಂಜೂರಾತಿಯಿ0ದ ಬ್ಯಾಂಕ್ ಒದಗಿಸಿದ್ದ ಬೋಟಿನ ಸಾಲ ಮರುಪಾವತಿಗೆ ಅನುಕೂಲವಾಯಿತು. ವಿಮಾ ಪರಿಹಾರ ಮಂಜೂರಾತಿಗೆ ಎದುರಾದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಕರಿಸಿದ ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲ ಸೀತರಾವiನ್, ಶ್ರೀ ರಾಜನಾಥ ಸಿಂಗ್, ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಮಲ್ಪೆ ಮೀನುಗಾರರ ಸಂಘ ಹಾಗೂ ನ್ಯಾಷನಲ್ ಇನ್ಶೂö್ಯರೆನ್ಸ್ ಕಂಪೆನಿಯ ಸಿಬ್ಬಂದಿಗಳಿಗೆ ಬ್ಯಾಂಕಿನ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಸುವರ್ಣ, ಪ್ರಧಾನ ಕಾರ್ಯದರ್ಶಿ ಶ್ರೀ ಸುಭಾಸ್ ಮೆಂಡನ್, ಯಾಂತ್ರಿಕ ಟ್ರಾಲ್ ಬೋಟ್ ಸಹಕಾರಿ ಸಂಘದ ಅಧ್ಯಕ್ಷರದ ಶ್ರೀ ರಾಮಚಂದ್ರ ಕುಂದರ್, ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಶ್ರೀ ಕಿಶೋರ್ ಸುವರ್ಣ, ಆಳ ಸಮುದ್ರ ಬೋಟ್ ತಂಡೇಲರ ಸಂಘದ ಅಧ್ಯಕ್ಷ ಶ್ರೀ ರವಿರಾಜ್ ಸುವರ್ಣ, ನ್ಯಾಷನಲ್ ಇನ್ಶುರೆನ್ಸ್ ಕಂಪೆನಿಯ ಅಧಿಕಾರಿ ಶ್ರೀ ನರಸಿಂಹ ಪೈ, ವಿಮಾ ಪ್ರತಿನಿಧಿಗಳಾದ ಶ್ರೀ ವಸಂತ್ ಎನ್. ಕೋಟ್ಯಾನ್, ಶ್ರೀ ವಿಜಯ ಪ್ರಕಾಶ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…