Featured

ಉಡುಪಿ: ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣ : ಯಾವುದೇ ಪರಿಹಾರ ನೀಡದೆ ಕೇಂದ್ರ ಸರಕಾರದಿಂದ ಮೀನುಗಾರ ಕುಟುಂಬಕ್ಕೆ ಅನ್ಯಾಯ : ರಮೇಶ್ ಕಾಂಚನ್ -Vishwanews24

ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣ : ಯಾವುದೇ ಪರಿಹಾರ ನೀಡದೆ ಕೇಂದ್ರ ಸರಕಾರದಿಂದ ಮೀನುಗಾರ ಕುಟುಂಬಕ್ಕೆ ಅನ್ಯಾಯ : ರಮೇಶ್ ಕಾಂಚನ್ -Vishwanews24

ಉಡುಪಿ: ಸುವರ್ಣ ತ್ರಿಭುಜ ಬೋಟ್‌ನಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ ಮೃತರಾದ ೭ ಮೀನುಗಾರರು ಕುಟುಂಬಕ್ಕೆ ಕೇಂದ್ರ ಸರಕಾರದಿಂದ ನಯಾ ಪೈಸೆ ಬಿಡುಗಡೆ ಬಗ್ಗೆ ಚಕಾರವೆತ್ತದ ಕರಾವಳಿಯ ಸಂಸದರ ನಡೆಯ ಬಗ್ಗೆ ಕಾಂಗ್ರೆಸ್ ಮುಖಂಡ, ಉಡುಪಿ ನಗರ ಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬೋಟ್ ದುರಂತ ನಡೆದು ಎರಡು ವರ್ಷವಾದರೂ, ಇನ್ನೂ ಈ ಘಟನೆಯ ತನಿಖೆ ಬಗ್ಗೆಯಾಗಲೀ, ಮೀನುಗಾರರಿಗೆ ಮತ್ತು ಅವರ ಕುಟುಂಬಕ್ಕೆ ಯಾವುದೇ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸರಕಾರ ನೀಡಿಲ್ಲ.

ಈ ದುರ್ಘಟನೆಗೆ ನೌಕಾಪಡೆಯ ಬೃಹತ್ ನೌಕೆಯೇ ಕಾರಣವೆಂದು ಮೀನುಗಾರರು ಆರೋಪ ಮಾಡುತ್ತಿದ್ದು, ಇದರ ಬಗ್ಗೆಯೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಕೂಡ ಚಕಾರವೆತ್ತುತ್ತಿಲ್ಲ. ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರಕ್ಕೂ ಪ್ರಯತ್ನಿಸದಿರುವುದು ಖಂಡನೀಯವೆಂದು ರಮೇಶ್ ಕಾಂಚಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನೌಕಾಪಡೆಯನ್ನು ರಕ್ಷಿಸಲು ಸತ್ಯಾಂಶ ಮರೆಮಾಚಲಾಗಿತ್ತು, ಅಧಿಕಾರಿಗಳು ನಿಜ ಹೇಳಲು ಮುಂದೆ ಬಂದು ಕೊನೆ ಕ್ಷಣದಲ್ಲಿ ಒಪ್ಪಿಕೊಂಡಿಲ್ಲದಿರಲು ಏನು ಕಾರಣವೆಂದು ಬಹಿರಂಗ ಪಡಿಸಲಿ. ಬೋಟ್ ಅವಘಡದಲ್ಲಿ ಕೇಂದ್ರ ಸರಕಾರ ಯಾವುದೇ ಪರಿಹಾರ ನೀಡದೆ ಮೀನುಗಾರ ಕುಟುಂಬಕ್ಕೆ ಅನ್ಯಾಯ ಎಸಗಿದೆಂದು ಕಾಂಚನ್ ದೂರಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago