ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದೀಗ ಸಿಬಿಐ ತನಿಖೆಗೆ ವಹಿಸಲಾಗಿದೆ.
ಮೇ 6ರಂದು ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆರೋಪಿಗಳ ಪತ್ತೆಗಾಗಿ ಎಸ್‌ಐಟಿ ರಚಿಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ:
ಪ್ರಕರಣ ಸಂಬಂಧ ಮೇ 11ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾಧಿಕಾರಿಗಳು ಡಿಜಿಟಲ್ ಸುಳಿವು ಮತ್ತು ಅಂತರರಾಜ್ಯ ಸಂಪರ್ಕ ಆಧಾರದ ಮೇಲೆ ಪ್ರಕರಣವನ್ನು ಭೇದಿಸಿದ್ದಾರೆ.
ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪೇಮೆಂಟ್ ತನಿಖಾಧಿಕಾರಿಗಳಿಗೆ ಮೊಬೈಲ್ ನಂಬರ್ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಎಸ್‌ಐಟಿ ಅಧಿಕಾರಿಗಳು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…