Featured

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದೀಗ ಸಿಬಿಐ ತನಿಖೆಗೆ ವಹಿಸಲಾಗಿದೆ.

ಮೇ 6ರಂದು ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆರೋಪಿಗಳ ಪತ್ತೆಗಾಗಿ ಎಸ್‌ಐಟಿ ರಚಿಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ:

ಪ್ರಕರಣ ಸಂಬಂಧ ಮೇ 11ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾಧಿಕಾರಿಗಳು ಡಿಜಿಟಲ್ ಸುಳಿವು ಮತ್ತು ಅಂತರರಾಜ್ಯ ಸಂಪರ್ಕ ಆಧಾರದ ಮೇಲೆ ಪ್ರಕರಣವನ್ನು ಭೇದಿಸಿದ್ದಾರೆ.

ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪೇಮೆಂಟ್ ತನಿಖಾಧಿಕಾರಿಗಳಿಗೆ ಮೊಬೈಲ್ ನಂಬರ್ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಎಸ್‌ಐಟಿ ಅಧಿಕಾರಿಗಳು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

3 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

4 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

4 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

4 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

4 hours ago

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

1 day ago