ಬೆಂಗಳೂರು: ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತರ ಡ್ರಗ್ಸ್ ಆರೋಪದ ಮೇಲೆ ಎನ್‌ಸಿಬಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಶುಕ್ರವಾರ ವಜಾ ಮಾಡಿದೆ.
ರಿಯಾ ಚಕ್ರವರ್ತಿ ಅವರನ್ನು ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಮಂಗಳವಾರ ಬಂಧಿಸಲಾಗಿತ್ತು. ಅಲ್ಲದೇ, ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ರಿಯಾ ಸಹೋದರ ಶೋಯಿಕ್ ಚಕ್ರವರ್ತಿ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಕೂಡಾ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ನಡೆದಿದ್ದು, ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿದೆ.
ಜುಲೈ 25ರಂದು ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು, ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ರಿಯಾ ಸೇರಿದಂತೆ ಅವರ ಕುಟುಂಬದ ವಿರುದ್ದ ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…