Featured

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ : ಸಿಬಿಐ ತನಿಖೆಗೆ ಸುಪ್ರೀಂ ಆದೇಶ -Vishwanews24

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸಲು ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದು ಈ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಪ್ರಕಟಿಸಿದೆ.

ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾವಣೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಪಾಟ್ನಾದಲ್ಲಿ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಸರಿಯಾಗಿದೆ. ಕಾನೂನಾತ್ಮಕವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವುದು ಸರಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಇನ್ನು ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಶಾಂತ್‌ ಕುಟುಂಬದ ಪರ ವಕೀಲ ವಿಕಾಸ್‌ ಸಿಂಗ್‌, ಇದು ಐತಿಹಾಸಿಕ ತೀರ್ಪು ಎಂದು ಹೇಳಿದ್ದಾರೆ.

ಜೂನ್ 14 ರಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ನಟ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್, ರಿಯಾ ಚಕ್ರವರ್ತಿ ಹಾಗೂ ಪಾಟ್ನಾದಲ್ಲಿರುವ ರಿಯಾನ ಸಹೋದರ ಶೋಯಿಕ್ ಚಕ್ರವರ್ತಿ ಸೇರಿದಂತೆ ಅವರ ಕುಟುಂಬದ 5 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago